ನವದೆಹಲಿ, ಮೇ 22 (DaijiworldNews/MS): ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಅನ್ನು ಜುಲೈನಲ್ಲಿ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯೋಜನೆ ಹಾಕಿಕೊಂಡಿದೆ. ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಬಾಹ್ಯಾಕಾಶ ನೌಕೆಯು ಪೇಲೋಡ್ ಗಳ ಅಂತಿಮ ಜೋಡಣೆಯಲ್ಲಿದೆ.
ಅತ್ಯಂತ ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ದ್ರುವದ ಮೇಲೆ ಚಂದ್ರಯಾನ-೩ ಬಾಹ್ಯಕಾಶ ನೌಕೆಯನ್ನು ಇಳಿಸಲಾಗುವುದು.
ಜುಲೈನಲ್ಲಿ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲು ನಿರ್ಧರಿಸಲಾಗಿದೆ.ನಾವು ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾರಂಭಿಸಬಹುದು, ಅಂತಿಮ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ಹೇಳಿದೆ.
ಮೂನ್ ಮಿಷನ್ ಕಾರ್ಯಕ್ರಮದ ಮೂರನೇ ಬಾಹ್ಯಾಕಾಶ ನೌಕೆಯು ಭಾರತದ ಅತ್ಯಂತ ಭಾರವಾದ ಉಡಾವಣಾ ವಾಹನ GSLV Mk III ನಿಂದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ.