ಬೆಂಗಳೂರು, ಮೇ 24(DaijiworldNews/MS): ಹೊಸ ಸ್ಪೀಕರ್ ಆಯ್ಕೆ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಕಾಂಗ್ರೆಸ್ ಬಹುಮತ ಪಡೆದ ಬಳಿಕ ಇದು ಮೂರನೇ ಬಾರಿಗೆ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ವಿಧಾನಸಭಾಧ್ಯಕ್ಷರ ಸ್ಥಾನಕ್ಕೆ ಈಗಾಗಲೇ ಯುಟಿ ಖಾದರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರತಿಯೊಬ್ಬ ಸದಸ್ಯರೂ ಖಾದರ್ ಅವರಿಗೆ ಮತ ಚಲಾಯಿಸಬೇಕೆಂದು ಸೂಚಿಸಲು ಮತ್ತು ಎಲ್ಲ ಶಾಸಕರಿಗೂ ವಿಪ್ ಜಾರಿಗೊಳಿಸುವುದಕ್ಕೆ ಈ ಸಿಎಲ್ಪಿ ಸಭೆ ಕರೆಯಲಾಗಿದೆ.
ಈ ವೇಳೆ ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಎಂದು ಸಚಿವ ಎಂಬಿ ಪಾಟೀಲ್ ವಿರುದ್ಧ ಅಸಮಾಧಾನ ಭುಗಿಲೇಳುವ ಸಾಧ್ಯತೆಯಿದೆ.