ಬೆಂಗಳೂರು, ಮೇ 25(DaijiworldNews/MS): ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು ಎಂದು ಕಾಂಗ್ರೆಸ್ ಪಕ್ಷವೂ ಬಿಜೆಪಿಗೆ ಲೇವಡಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ "ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಬಿಜೆಪಿಯಲ್ಲಿ ಸೋಲಿನ ಹೊಣೆ ಯಾರದ್ದು ಅಮಿತ್ ಷಾ , ಬೊಮ್ಮಾಯಿಯವರದ್ದೋ? ಮೋದಿ , ನಳಿನ್ ಕಟೀಲರದ್ದೋ?" ಎಂದು ಪ್ರಶ್ನಿಸಿ ವ್ಯಂಗ್ಯವಾಡಿದೆ.
ಮತ್ತೊಂದು ಟ್ವೀಟ್ ನಲ್ಲಿ , "ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಹೇಳಿದೆ.