ನವದೆಹಲಿ, ಮೇ26 (DaijiworldNews/MS): ಸಂಪುಟ ವಿಸ್ತರಣೆ ಚರ್ಚೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ.
2ನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಸಿದ್ದು ಸೋನಿಯಾ ಗಾಂಧಿ ಯನ್ನು ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಸೋನಿಯಾ ನಿವಾಸದಲ್ಲಿ ಚರ್ಚಿಸಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದ ಸಿದ್ದು, ಕೆಲ ಮಾರ್ಗದರ್ಶನಗಳನ್ನೂ ಪಡೆದುಕೊಂಡಿದ್ದಾರೆ. ಕಾರ್ಯನಿಮಿತ್ತ ಶಿಮ್ಲಾಗೆ ತೆರಳಿದ್ದ ಸೋನಿಯಾ ನಿನ್ನೆ ತಾನೆ ದೆಹಲಿಗೆ ವಾಪಾಸಾಗಿದ್ದರು.