ಬೆಂಗಳೂರು, ಮೇ 27(DaijiworldNews/MS): ಚುನಾವಣೆಯ ಕೊನೆ ಕ್ಷಣದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಮಂತ್ರಿ ಸ್ಥಾನ ನೀಡಬಹುದು ಎನ್ನುವ ನಿರೀಕ್ಷೆಯಿತ್ತು.
ಆದರೆ, ಕಾಂಗ್ರೆಸ್ ಹೈಕಮಾಂಡ್ ಉತ್ತರ ಕರ್ನಾಟಕ ಭಾಗದ ಈ ಇಬ್ಬರು ಪ್ರಬಲ ನಾಯಕರಿಗೂ ಮಂತ್ರಿ ಸ್ಥಾನ ನೀಡದೆ ಶಾಕ್ ಕೊಟ್ಟಿದೆ. ಅದರಲ್ಲಿಯೂ ಬೆಳಗಾವಿ ಭಾಗದಲ್ಲಿ ರಮೇಶ್ ಜಾರಕಿಹೊಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ನಲ್ಲಿ ಗೆದ್ದು ಬಂದಿರುವ ಸವದಿ ಅವರನ್ನು ಕಡೆಗಣಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.
ಇನ್ನು ಶಾಸಕ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ