ನವದೆಹಲಿ, ಮೇ 27(DaijiworldNews/HR): ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ಕೆಲವರ ವಿರುದ್ಧ ದೂರು ದಾಖಲಿಸಲಾಗಿದೆ.
ರಾಜಕೀಯ ಗುರಿಗಳನ್ನ ಸಾಧಿಸುವ ಸಲುವಾಗಿ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮುದಾಯಗಳ ನಡುವೆ ದ್ವೇಷ' ಮತ್ತು 'ಭಾರತ ಸರ್ಕಾರದ ಬಗ್ಗೆ ಅಪನಂಬಿಕೆ' ಸೃಷ್ಟಿಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಇನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121, 153 ಎ, 505 ಮತ್ತು 34ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ವರದಿ ಮಾಡಿದೆ.