ನವದೆಹಲಿ, ಮೇ 28 (DaijiworldNews/HR): ಭಾರತದ ನೂತನ ಸಂಸತ್ ಭವನ ಇಂದು ಉದ್ಘಾಟನೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಭಾನುವಾರ ಬೆಳ್ಳಗ್ಗೆ ನೂತನ ಸಂಸತ್ ಭವನದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನದ ಕಟ್ಟಡಕ್ಕೆ ಆಗಮಿಸಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
1200 ಕೋಟಿ ರೂ. ವೆಚ್ಚದಲ್ಲಿ 39.6 ಮೀಟರ್ ಎತ್ತರದಲ್ಲಿ ನಾಲ್ಕು ಅಂತಸ್ತಿನ ನೂತನ ಸಂಸತ್ ಭವನ ನಿರ್ಮಾಣ ಮಾಡಲಾಗಿದ್ದು, 1272 ಆಸನ ಸಾಮರ್ಥ್ಯವನ್ನು ಇದು ಹೊಂದಿದೆ.
ನೂತನ ಸಂಸತ್ ಭವನದ ಉದ್ಘಾಟನೆ ಒಟ್ಟು 2 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಧಾರ್ಮಿಕ ಕಾರ್ಯಕ್ರಮ, ಸೆಂಗೋಲ್ ಪ್ರತಿಷ್ಠಾಪನೆ ನಡೆಯಲಿದೆ. ಎರಡನೇ ಹಂತದಲ್ಲಿ ರಾಜ್ಯಸಭೆ ಸಭಾಪತಿ, ಲೋಕಸಭೆ ಸ್ಪೀಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾಷಣ ಇರಲಿದೆ.