ಇಂಫಾಲ್, ಮೇ 29 (DaijiworldNews/KH): ಜನಾಂಗೀಯ ಘರ್ಷಣೆಯಲ್ಲಿ 80 ಜನರನ್ನು ಬಲಿ ಪಡೆದಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದ ನಂತರ ಪೊಲೀಸ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ .ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲೇ ಈ ಘಟನೆ ಸಂಭವಿಸಿದೆ.
ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದಂತೆಯೇ ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಮತ್ತು ಇಂಟರ್ನೆಟ್ ನಿಷೇಧವನ್ನು ವಿಧಿಸಲಾಯಿತು. ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರ ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಹಲವು ಮನೆಗಳಿಗೆ ಬೆಂಕಿ ಹಚ್ಚಿದ ನಂತರ ರಾಜ್ಯದ ಹಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ.
ಇನ್ನೂ, ಹಿಂಸಾಚಾರವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಯಲ್ಲಿ 11 ಗಂಟೆಗಳ ಕರ್ಫ್ಯೂ ಸಡಿಲಿಕೆಯ ಅವಧಿಯನ್ನು ಕೇವಲ ಆರೂವರೆ ಗಂಟೆಗಳವರೆಗೆ ಕಡಿಮೆ ಮಾಡಲು ಜಿಲ್ಲಾ ಅಧಿಕಾರಿಗಳನ್ನು ಪ್ರೇರೆಪಿಸಿದ್ದಾರೆ.