ಇಂಫಾಲ , ಮೇ 30 (DaijiworldNews/KH): ಮಣಿಪುರದಲ್ಲಿ ಕೆಳ ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದಾಗಿ ಕೇಂದ್ರ ಹಾಗೂ ಮಣಿಪುರ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ ಘೋಷಿಸಿದೆ.
ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಣಿಪುರದ ಎನ್ ಬಿರೇನ್ ಸಿಂಗ್ ಸಭೆ ನಡೆಸಿದ್ದು, ಈ ವೇಳೆ ಮುಖ್ಯಮಂತ್ರಿ ಪರಿಹಾರವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಕೊಡಿಸಲಾಗುವುದು ಮತ್ತು ಪರಿಹಾರದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಭರಿಸಲಿದೆ ಎಂದು ಅಧಿಕಾರಿಗಳು.
ಇನ್ನೂ, ಮಣಿಪುರದಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಪೊಲೀಸರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ 1 ತಿಂಗಳ ಸಾವಿನ ಸಂಖ್ಯೆ 80ಕ್ಕೆ ಏರಿಕೆದ್ದು ಮಣಿಪುರದ ಪರಿಸ್ಥಿತಿಯು ಮುಚ್ಚಿದ ಕೆಂಡದಂತಾಗಿರುವುದರಿಂದ ಮೇ 31 ರವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.