ಬೆಳಗಾವಿ, ಮೇ 31 (DaijiworldNews/HR): ಕರ್ನಾಟಕವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿಗೆ ತರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾವು ಯಾವಾಗಲೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತೇವೆ. ಇದು ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾನಿಕಾರಕವಾಗಿದೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದರು.
ಇನ್ನು ಈ ನೀತಿಯು ವಂಚಿತ ವರ್ಗಗಳಿಗೆ ಶಿಕ್ಷಣದ ಅವಕಾಶಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಹೆಚ್ಚಿನ ಶಿಕ್ಷಣ ತಜ್ಞರು ಇದನ್ನು ವಿರೋಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎನ್ಇಪಿಯ ದುಷ್ಪರಿಣಾಮಗಳ ಕುರಿತು ಅಧ್ಯಯನ ನಡೆಸಿ ಕ್ರಮಕ್ಕೆ ಶಿಫಾರಸು ಮಾಡುವ ತಜ್ಞರ ಸಮಿತಿಯನ್ನು ರಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.