ತುಮಕೂರು, ಮೇ 31 (DaijiworldNews/HR): ಕರ್ನಾಟಕದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು, ತುಮಕೂರು ಹಾಗೂ ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಾಡಿದ್ದಾರೆ.
ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.