ನವದೆಹಲಿ, ಜೂ 01 (DaijiworldNews/HR): ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ.
ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿರುವ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಇನ್ನು ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಒಕ್ಕೂಟ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.