ಬೆಂಗಳೂರು, ಜೂ 02 (DaijiworldNews/MS): ವಿದ್ಯಾರ್ಥಿನಿಯರು ಸೇರಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಜೂ. ೧೧ರಿಂದ ಈ ತಿಂಗಳ 11 ರಿಂದ ಉಚಿತ ಬಸ್ ಪ್ರಯಾಣದ ಲಾಭ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ’ಶಕ್ತಿ ಯೋಜನೆ ’ ಕರ್ನಾಟಕದ ರಾಜ್ಯದೊಳಗೆ ಅನ್ವಯವಾಗುತ್ತದೆ. ಎಸಿ, ಸ್ಲೀಪರ್ ಹಾಗೂ ಐಷಾರಾಮಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ನಲ್ಲಿ ಶೇಕಡಾ 50 ರಷ್ಟು ರಿಸರ್ವ್ ಮಾಡಲಾಗುತ್ತದೆ. ಮಹಿಳೆಯರು, ವಿದ್ಯಾರ್ಥಿನಿಯರು ಜೂನ್ 11 ರಿಂದ ಯಾವುದೇ ಹಣ ಪಾವತಿಸದೇ ಪ್ರಯಾಣ ಮಾಡಬಹುದಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ನಾವು ಬಹಳ ಸುಧೀರ್ಘವಾಗಿ ಐದು ಗ್ಯಾರಂಟಿಗಳನ್ನು ಚರ್ಚೆ ಮಾಡಿದ್ದೇವೆ. ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಕೊಡಬೇಕು ಎಂಬುದಾಗಿ ತೀರ್ಮಾನ ಮಾಡಿದ್ದೇವೆ. ಅದು ಯಾವುದೇ ಜಾತಿ, ಯಾವುದೇ ಧರ್ಮ, ಯಾವುದೇ ಭಾಷೆ ಇವು ಯಾವುದು ಇಲ್ಲದೆ ಎಲ್ಲಾ ಜಾತಿ, ಧರ್ಮ, ಭಾಷೆಯವರಿಗೆ ಕರ್ನಾಟಕದ ಜನರಿಗೆ, ಜನತೆಗೆ ಈ ಗ್ಯಾರಂಟಿಗಳನ್ನು ತಲುಪಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.