ಒಡಿಶಾ, ಜೂ 03 (DaijiworldNews/MS): ಒಡಿಶಾದ ಬಲಸೋರ್ ನಲ್ಲಿ ನಡೆದ ತ್ರಿವಳಿ ರೈಲುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 233ಕ್ಕೆ ಏರಿಕೆಯಾಗಿದ್ದು ಸುಮಾರು 900 ಮಂದಿ ಗಾಯಗೊಂಡಿದ್ದಾರೆ. ಈ ನಡುವೆ . ರೈಲು ಹಳಿ ತಪ್ಪಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಘಟನೆಯ ಕುರಿತು ವೈಷ್ಣವ್ ಪ್ರತಿಕ್ರಿಯಿಸಿದ್ದು, 'ಅಪಘಾತವು ದುರದೃಷ್ಟಕರವಾಗಿದೆ, ಘಟನೆಯ ಕುರಿತು ಸಚಿವಾಲಯಕ್ಕೆ ಮಾಹಿತಿ ಬಂದ ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದೇವೆ. ಪ್ಯಾಸೆಂಜರ್ ರೈಲು ಬೋಗಿಗಳು ಹಳಿ ತಪ್ಪಲು ಕಾರಣವೇನೆಂದು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಇಲಾಖೆ ಈಗಾಗಲೇ ಘೋಷಿಸಿದೆ" ಎಂದು ವಿವರಿಸಿದ್ದಾರೆ.
ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಮದ್ಯೆ ಅಪಘಾತ ಸಂಭವಿಸಿತ್ತು.