ಬೆಂಗಳೂರು, ಜೂ 09 (DaijiworldNews/HR): ಬಿಜೆಪಿಯು ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಅವಲೋಕನ ಸಭೆ ನಡೆಸಲಾಗಿದ್ದು, ಈ ವೇಳೆ ಪರಾಜಿತ ಅಭ್ಯರ್ಥಿಗಳು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಅವಲೋಕನ ಸಭೆ ನಡೆದಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಸಿ.ಸಿ. ಪಾಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಜಿ ವಿ ರಾಜೇಶ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
ಸಭೆ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ಇಂದಿನ ಸಭೆಯಲ್ಲಿ ಗೆದ್ದ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಇನ್ನೂ ಏನೇನು ಮಾಡಬಹುದಿತ್ತು ಎಂಬ ಚರ್ಚೆ ನಡೆದಿದೆ. ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತದೆ ಎಂದರು
ಸಿ.ಟಿ. ರವಿ ಮಾತನಾಡಿ, 16ನೇ ವಿಧಾನಸಭೆಗೆ ಆಯ್ಕೆಯಾದ ಚುನಾವಣೆಗೆ ಆಯ್ಕೆಯಾದ ಶಾಸಕರ ಜೊತೆ ಸಭೆ ಮಾಡಲಾಗಿದ್ದು, 22 ನೂತನವಾಗಿ ಮೊದಲ ಬಾರಿಗೆ ಆಯ್ಕೆಯಾಗಿರೋ ಸದಸ್ಯರ ಪರಿಚಯದೊಂದಿಗೆ ಎಲ್ಲ ಶಾಸಕರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಯಿತು ಎಂದಿದ್ದಾರೆ.
ಇನ್ನು ಪರಾಜಿತ ಅಭ್ಯರ್ಥಿಗಳ ಸಭೆ ಸಂಜೆ ನಡೆದಿದ್ದು, ಪ್ರಮುಖವಾಗಿ ಡಾ. ಸುಧಾಕರ್, ವಿ. ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ ಗೈರಾಗಿದ್ದರು.
ಇತರೆ ಪರಾಜಿತ ಅಭ್ಯರ್ಥಿಗಳಾದ ಪರಾಜಿತ ಅಭ್ಯರ್ಥಿಗಳಾದ ಬಿ.ಸಿ ನಾಗೇಶ್, ಎಂಟಿಬಿ ನಾಗರಾಜ್, ಸಿ.ಪಿಯೋಗೇಶ್ವರ್, ಪ್ರೀತಮ್ ಗೌಡ, ವರ್ತೂರು ಪ್ರಕಾರ, ಮುರುಗೇಶ್ ನಿರಾಣಿ , ನಾರಾಯಣ್ ಗೌಡ, ಬಿ.ಸಿ ಪಾಟೀಲ್, ಜೀವರಾಜ್, ವಿಜಯಶಂಕರ್, ಮಹೇಶ್ ಕುಮಟಹಳ್ಳಿ, ಪಿ.ರಾಜೀವ್, ರಾಜ್ಕುಮಾರ್ ಪಾಟೀಲ್ ತೇಲ್ಕೂರು, ರೂಪಾಲಿ ನಾಯಕ್, ಉಮೇಶ್ ಶೆಟ್ಟಿ, ಪದ್ಮನಾಭ ರೆಡ್ಡಿ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ನಾಗೇಂದ್ರ, ಹಾಲಪ್ಪ ಆಚಾರ್, ತಮ್ಮೇಶ್ ಗೌಡ, ಸಪ್ತಗಿರಿ ಗೌಡ, ಪೂರ್ಣಿಮಾ ಶ್ರೀನಿವಾಸ್ , ಅಪ್ಪಚ್ಚು ರಂಜನ್, ಭಾಸ್ಕರ್ ರಾವ್,ಗೋವಿಂದ ಕಾರಜೋಳ, ಸುನಿಲ್ ನಾಯಕ್, ಹರ್ಷವರ್ಧನ್ ಸಭೆಯಲ್ಲಿ ಭಾಗಿಯಾಗಿದ್ದರು.
ಅನೇಕ ಶಾಸಕರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಚಿವರು ಸರ್ಕಾರ ಇದ್ದಾಗ ಸರಿಯಾಗಿ ಸ್ಪಂದಿಸಲಿಲ್ಲ. ಪಕ್ಷದ ಮುಖಂಡರು ಅಭ್ಯರ್ಥಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಪಕ್ಷ ಬಿಟ್ಟಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಡೆತ ಆಯಿತು. ನಾಯಕರು ಮಾಡಿರುವ ತಪ್ಪಿನಿಂದ ನಾವು ಬಲಿಯಾದೆವು ಎಂದಿದ್ದಾರೆ.