ಮುಂಬೈ, ಜೂ 12 (DaijiworldNews/MS): ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಐಟಿ ಕಂಪನಿ ಉದ್ಯೋಗಿಯನ್ನು ಬಂಧಿಸಿದ್ದಾರೆ.
ಮುಂಬೈ ಕ್ರೈಂ ಬಾಂಚ್ ಪುಣಿಯಲ್ಲಿ34 ವರ್ಷದ ಸಾಗರ್ ಬರ್ವೆಯನ್ನು ಬಂಧಿಸಿದ್ದಾರೆ.
ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿಕೊಲೆ ಬೆದರಿಕೆಗಳನ್ನು ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿದ್ದ. ವಾಟ್ಸಾಪ್ ಮೂಲಕ ಆರೋಪಿ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಸಂಬಂಧ ಮುಂಬೈ ಪೊಲೀಸರಿಗೆ ಸುಪ್ರಿಯಾ ಸುಳೆ ದೂರು ನೀಡಿದ್ದರು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.