ಬೆಂಗಳೂರು, ಜೂ 12 (DaijiworldNews/HR): ಯಡಿಯೂರಪ್ಪ ಅವರ ಪುತ್ರ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭೇಟಿಯಾಗುವ ಮೊದಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಘವೇಂದ್ರ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಭೇಟಿಯಾಗಿ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.