ನವದೆಹಲಿ, ಜೂ13 (DaijiworldNews/HR): ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.
ಮಂಗಳವಾರ ಮಧ್ಯಾಹ್ನ 1.30ರ ನಂತರ ಕೆಲ ಸೆಕೆಂಡುಗಳ ಭೂಮಿ ಕಂಪಿಸಿದ್ದು, ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಇನ್ನು ಭೂಕಂಪನದ ತೀವ್ರತೆ 5.4 ರಷ್ಟಿದ್ದು, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೂಮಿಯ 6 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ ಟ್ವೀಟ್ ಮೂಲಕ ತಿಳಿಸಿದೆ.