ದಾವಣಗೆರೆ, ಜೂ 14 (DaijiworldNews/MS): ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ದಾವಣಗೆರೆ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ಮಂಗಳವಾರ ಸಂಜೆ ಗುಪ್ತ ಮಾತುಕತೆ ನಡೆಸಿದ್ದಾರೆ. ರೆಸಾರ್ಟ್ನಲ್ಲಿ ಲಿಂಗಾಯಿತ ನಾಯಕರಿಬ್ಬರು ಸುಮಾರು 25 ನಿಮಿಷಗಳ ಕಾಲ ಸುಧೀರ್ಘ ಚರ್ಚೆ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬೆನ್ನಲ್ಲೇ ಬೊಮ್ಮಾಯಿ ಮತ್ತು ಶಾಮನೂರು ಭೇಟಿ ತೀವ್ರ ಕುತೂಹಲ ಮೂಡಿಸಿದೆ.