ಮಣಿಪುರ, ಜೂ 14 (DaijiworldNews/MS): ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, 9 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮೈತೈ ಪ್ರಾಬಲ್ಯದ ಇಂಫಾಲ್ ಪೂರ್ವ ಜಿಲ್ಲೆ ಮತ್ತು ಬುಡಕಟ್ಟು ಜನಾಂಗದ ಬಹುಸಂಖ್ಯಾತ ಕಾಂಗ್ಪೋಕ್ಪಿ ಜಿಲ್ಲೆಯ ಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ
ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಉಗ್ರರು ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ ಗಡಿಯಲ್ಲಿರುವ ಖಮೆನ್ಲೋಕ್ ಪ್ರದೇಶದ ಗ್ರಾಮಸ್ಥರನ್ನು ಸುತ್ತುವರೆದು ಮಧ್ಯರಾತ್ರಿ 1 ಗಂಟೆಗೆ ದಾಳಿ ನಡೆಸಿದರು
ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಣಿಪುರದಲ್ಲಿ ಒಂದು ತಿಂಗಳ ಹಿಂದೆ ಭುಗಿಲೆದ್ದ ಮೈತೆಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿ 310 ಜನರು ಗಾಯಗೊಂಡಿದ್ದರು