ಗಂಗಾವತಿ, ಜೂ 16 (DaijiworldNews/HR): ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಅಂಜಿನಮ್ಮ( 51) ಸ್ಥಳದಲ್ಲೇ ಮೃತಪಟ್ಟಿ ಮಹಿಳೆ.
ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಸಿಲುಕಿ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ.
ಇನ್ನು ಶಾಮೀದಾಬೀ(48) ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿದೆ. ಶೃತಿ(23),ದುರುಗಮ್ಮ,(40),ಶಾರದ(30) ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.