ಬೆಂಗಳೂರು, ಏ 1 (MSP) : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸಮಾಧಾನಗೊಂಡು ಡಾ.ಉಮೇಶ್ ಜಾಧವ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದ ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಅಂಗೀಕರಿಸಿದ್ದಾರೆ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಡಾ.ಉಮೇಶ್ ಜಾಧವ್ ಮಾರ್ಚ್ 4ರಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಅವರು ಕಾಂಗ್ರೆಸ್ ನ ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.
ನಂತರ ಕಾಂಗ್ರೆಸ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿಯಲ್ಲಿ ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಜಾಧವ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸದ್ಯ ಉಮೇಶ್ ಜಾಧವ್ ಅವರು ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.