ಕಲಬುರಗಿ, ಜೂ 19 (DaijiworldNews/HR): ಮಹಿಳೆಯರಂತೆ ಪುರುಷರೂ ಮತದಾನ ಮಾಡಿದ್ದು, ಮಹಿಳೆಯರಿಗೆ ಮಾತ್ರ ಉಚಿತ ಬಸ್ ಸೌಲಭ್ಯ ನೀಡುವುದು ಸರಿಯಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಚುನಾವಣೆ ಪ್ರಚಾರದ ಭರಾಟೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಆದರೆ ಅವುಗಳನ್ನು ಅನುಷ್ಠಾನಕ್ಕೆ ತರಲು ಸರ್ಕಸ್ ಮಾಡುತ್ತಿದೆ. ಪುರುಷರಿಗೂ ಉಚಿತ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದರೆ.
ಇನ್ನು ಪುರುಷರಿಗೂ ಉಚಿತ ಬಸ್ ಸೌಲಭ್ಯ ಯೋಜನೆ ಜಾರಿಗೆ ತರುವಂತೆ ಶೀಘ್ರವೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಮ್ದಿದ್ದಾರೆ.
ನಿರುದ್ಯೋಗಿಗಳಿಗೆ ಭತ್ತೆ ಕೊಡುವ ಬದಲು ಉದ್ಯೋಗ ಸೃಷ್ಟಿಸುವ ಕೆಲಸವಾಗಬೇಕು. ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಉದ್ಯೋಗ ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.