ಲಕ್ನೋ, ಜೂ 19 (DaijiworldNews/MS): ಉತ್ತರ ಭಾರತ ಬಿಸಿಲಿನ ಝಳ ಏರುತ್ತಿದ್ದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ 98 ಮಂದಿ ಬಿಸಿಗಾಳಿಯಿಂದ ಮೃತಪಟ್ಟಿದ್ದಾರೆ.
ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದ ಕಾರಣ ನಾಲ್ಕು ದಿನಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನಿಷ್ಠ 57 ಜನರು ಸಾವನ್ನಪ್ಪಿದ್ದಾರೆ.
ಇನ್ನೂ 400ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಬಿಸಿಗಾಳಿಯಿಂದ ಉಂಟಾದ ಜ್ವರ, ಉಸಿರಾಟದ ತೊಂದರೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇನ್ನು ಸಾವಿನ ಕಾರಣವನ್ನು ಕಂಡುಹಿಡಿಯಲು ಲಕ್ನೋದಿಂದ ಆರೋಗ್ಯ ಇಲಾಖೆಯ ಸಮಿತಿಯು ಪೀಡಿತ ಜಿಲ್ಲೆಗೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಗೆ ವ ಪ್ರತಿದಿನ ಸುಮಾರು 125 ರಿಂದ 135 ರೋಗಿಗಳು ದಾಖಲಾಗುತ್ತಿರುವುದರಿಂದ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರ ಕೊರತೆಯೂ ತಲೆದೋರಿದೆ.