ಬೆಂಗಳೂರು, ಜೂ 21 (DaijiworldNews/MS): ಸುಳ್ಳು ಸುದ್ದಿ ಹಾವಳಿ ಕಡಿವಾಣಕ್ಕೆ ರಾಜ್ಯದ ಎಲ್ಲ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಸುಳ್ಳು ಸುದ್ದಿ ತಡೆಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣ ಮುಖ್ಯಸ್ಥರ ಜತೆ ಸಭೆ ಕರೆಯಲಾಗುತ್ತಿದೆ. ಯಾರು ಫೇಕ್ ಸುದ್ದಿ ಹಬ್ಬಿಸುತ್ತಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಪಕ್ಷ ಇರಲಿ ಅಥವಾ ಸಂಘಟನೆ ಇರಲಿ; ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದಿದ್ದಾರೆ.
"ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಕಳೆದೆರಡು ದಿನದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.