ಬೆಂಗಳೂರು, ಜೂ 23 (DaijiworldNews/MS): ಬೆಂಗಳೂರು ನಗರದ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಘಟನೆ ನಡೆದು ಐದು ತಿಂಗಳ ನಂತರ ಪೊಲೀಸರು ನ್ಯಾಯಾಲಯಕ್ಕೆ 1100 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ನಿರ್ಮಾಣ ಕಂಪನಿಯ ಇಂಜಿನಿಯರ್ಸ್ ಹಾಗೂ ಬಿಎಂಆರ್ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದರೊಂದಿಗೆ ಐಐಟಿ ರಿಪೋರ್ಟ್ ಮತ್ತು ಎಫ್ಎಸ್ಎಲ್ ರಿಪೋರ್ಟ್ ನ್ನು ಸಲ್ಲಿಸಿದ್ದಾರೆ
ಅಧಿಕಾರಿಗಳ ಲೋಪ ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ.
ಗದಗ ಮೂಲದ ಲೋಹಿತ್ ಕುಮಾರ್ ಮತ್ತು ತೇಜಸ್ವಿನಿ ದಂಪತಿ ತಮ್ಮ ಎರಡೂವರೆ ವರ್ಷದ ಕ್ಕಳ ಜೊತೆ ತೆರಳುತ್ತಿದ್ದಾಗ ಹೆಚ್ಆರ್ಬಿಆರ್ ಲೇಔಟ್ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ನ ಕಬ್ಬಿಣದ ರಾಡ್ಗಳು ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದಿತ್ತು. ಅವಳಿ ಮಕ್ಕಳ ಪೈಕಿ ಒಂದು ಮಗು ವಿಸ್ಮಿತಾ ಮತ್ತು ಮೃತೆಯ ಪತಿ ಲೋಹಿತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು.