ಚಿಕ್ಕಮಗಳೂರು, ಜೂ 24 (DaijiworldNews/HR): ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ ಎಂದರು.
ಇನ್ನು ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ? ಪಾರ್ಲಿಮೆಂಟ್ ಚುನಾವಣೆಯಿದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿಯರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದಿದ್ದಾರೆ.