ಭೋಪಾಲ್, ಜೂ 27 (DaijiworldNews/MS): ಬೆಂಗಳೂರು-ಧಾರವಾಡ , ರಾಣಿ ಕಮಲಾಪತಿ-ಜಬಲ್ಪುರ್ ಸೇರಿದಂತೆ ಒಟ್ಟು ಐದು ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಇಂದು ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ.
ಖಜುರಾಹೊ-ಭೋಪಾಲ್-ಇಂದೋರ್ , ಮಡಗಾಂವ್-ಮುಂಬೈ ಮತ್ತು ಹಟಿಯಾ-ಪಾಟ್ನಾ ಉಳಿದ ನಾಲ್ಕು ವಂದೇ ಭಾರತ್ ಸಂಚರಿಸುವ ಮಾರ್ಗಗಳು. ಈ ಪೈಕಿ ರಾಣಿ ಕಮಲಾಪತಿ-ಜಬಲ್ಪುರ್ ಹೊರತುಪಡಿಸಿ ಉಳಿದ ರೂಟ್ಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ.
ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಆಗಿದ್ದು, ಇದು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ 6 ದಿನ ಸಂಚರಿಸಲಿದೆ.
ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.