ಪಶ್ಚಿಮ ಬಂಗಾಳ, ಜೂ 27 (DaijiworldNews/HR): ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಅನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು.
ಪಶ್ಚಿಮ ಬಂಗಾಳದಲ್ಲಿ ಜುಲೈ 8ರಂದು ಪಂಚಾಯತ್ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಭಾಗವಾದ ಜಲ್ಪಾಯಿಗುಢಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಮಮತಾ ಬ್ಯಾನರ್ಜಿ ಅವರಿಗೆ ಹವಾಮಾನ ವೈಪರೀತ್ಯ ಅಡ್ಡಬಂದಿದೆ.
ಇನ್ನು ಹವಾಮಾನ ವೈಪರೀತ್ಯ ಅಡ್ಡಬಂದ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದ್ದು ಬಳಿಕ ಅವರು ವಿಮಾನ ಮೂಲಕ ಪ್ರಯಾಣ ಮುಂದುವರೆಸಿದ್ದಾರೆ.