ಬೆಂಗಳೂರು, ಜೂ 28 (DaijiworldNews/SM):ಎಲ್ಲಾ ಇಲಾಖೆಗಳು, ನಿಗಮಗಳ ಕಾಮಗಾರಿ ಬಿಲ್ ಬಿಡುಗಡೆ ಮಾಡುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಆ ಮೂಲಕ ಗುತ್ತಿಗೆದಾರರ ಒತ್ತಡಕ್ಕೆ ರಾಜ್ಯ ಸರ್ಕಾರ (govt) ಕೊನೆಗೂ ಮಣಿದಿದೆ. ಎಲ್ಲಾ ಇಲಾಖೆಗಳು, ಅಧೀನಕ್ಕೊಳಪಡುವ ಕಾಮಗಾರಿ ಬಿಲ್ ಪಾವತಿ, ನೈಜತೆ, ನಿಯಮಾನುಸಾರ ಇದೆಯಾ ಎಂದು ಖಾತ್ರಿ ಪಡಿಸಿಕೊಂಡು ಸಂಬಂಧಿಸಿದ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಏಕ್ರೂಪ್ ಕೌರ್ರಿಂದ ಸುತ್ತೋಲೆ ಹೊರಡಿಸಲಾಗಿದೆ.
ಎಲ್ಲಾ ಇಲಾಖೆಗಳು ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ, ಮಂಡಳಿ, ಪ್ರಾಧಿಕಾರಗಳ ಮುಂದುವರೆದ ಕಾಮಗಾರಿಗಳಿಗೆ ಸಂಬಂಧಿಸಿದಂತ ಬಿಲ್ಲುಗಳ ನೈಜತೆಯನ್ನು ಹಾಗೂ ನಿಯಮಾನುಸಾರವಿರುವುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವುದು.
ಎಲ್ಲಾ ಶಾಸನಬದ್ಧ ಪಾವತಿಗಳನ್ನು ಹಾಗೂ ಬಾಹ್ಯ ನೆರವಿನ ಮುಂದುವರೆದ ಯೋಜನಗಳಿಗೆ ಸಂಬಂಧಿಸಿದಂತ ಹಣ ಬಿಡುಗಡೆ ಮಾಡುವುದು.
ಮುಂದುವರಿದ ಕಾರ್ಯಕ್ರಮ/ಯೋಜನಗಳಿಗೆ ಸಂಬಂಧಿಸಿದಂತೆ ಸರಕು ಮತ್ತು ಸೇವೆಗಳ ಸಂಗ್ರಹಣೆಗಳ ಸಂಬಂಧ ಹಣ ಬಿಡುಗಡೆ ಮಾಡಬಹುದಾಗಿದೆ.