ಬೆಂಗಳೂರು, ಜೂ 30(DaijiworldNews/MS): ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆಆರ್ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಶುಕ್ತವಾರ ಮಧಾಹ್ನ ಸಿಟಿ ಸಿವಿಲ್ ಕೋರ್ಟ್ ಆರೋಪಿಯನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಸಲ್ಲಿಸಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಲಯ ಏಳು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ಅಜಿತ್ ರೈಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್ಗಳನ್ನು ವಶಕ್ಕೆ ಪಡೆದಿದ್ದರು. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದು, ಎಲ್ಲ ಕಾರಿಗೂ ಒಂದೇ ನಂಬರ್ ರಿಜಿಸ್ಟರ್ ಇದೆ. ಆದರೆ ಇದ್ಯಾವುದಕ್ಕೂ ಅಜಿತ್ ರೈ ಲೆಕ್ಕ ಕೊಡುತ್ತಿಲ್ಲ ಎನ್ನಲಾಗಿದೆ.
ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ.