ಗುಜರಾತ್, ಜು 01 (DaijiworldNews/HR): 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ಗೆ ಗುಜರಾತ್ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ತೀಸ್ತಾ ಸೆಟಲ್ವಾಡ್ಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆಕೆಯನ್ನು ಇಲ್ಲಿಯವರೆಗೆ ಬಂಧನದಿಂದ ರಕ್ಷಿಸಿದೆ. ಆದರೆ ಇಂದು ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಗುಜರಾತ್ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಕೂಡಲೇ ಶರಣಾಗುವಂತೆ ಆದೇಶಿಸಿದೆ.
ಇನ್ನು 2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಟಾಪ್ ಕಾಪ್ ಆರ್ಬಿ ಶ್ರೀಕುಮಾರ್ ಅವರನ್ನು ಸುಳ್ಳು ಸಾಕ್ಷ್ಯಾಧಾರ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಜೂನ್ 25, 2022 ರಂದು ಬಂಧಿಸಿದ್ದಾರೆ.