ಬೆಂಗಳೂರು, ಜು 02 (DaijiworldNews/HR): ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ.
ಗೃಹಜ್ಯೋತಿ ಸ್ಕೀಮ್ ಗೆ ಅರ್ಜಿ ಸಲ್ಲಿಕೆ ಬರದಿಂದ ಸಾಗುತ್ತಿದ್ದು, ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಸಿಗಲಿದೆ. ಜುಲೈ ತಿಂಗಳ ಬಿಲ್ ಬರುವ ಮುನ್ನ ಅರ್ಜಿ ಸಲ್ಲಿಸಬೇಕು. ಇಲ್ಲದಿದ್ರೆ ಕರೆಂಟ್ಗೆ ಬಿಲ್ ಹಣವನ್ನ ಕಟ್ಟಲೇಬೇಕಾಗುತ್ತದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಇನ್ನು ಗೃಹಜ್ಯೋತಿಗೆ ಅರ್ಜಿ ಹಾಕುವುದು ತಡವಾದ್ರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ. ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ. ಅದೇ ರೀತಿ ಆಗಸ್ಟ್ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ, ಆ ತಿಂಗಳಿಗೆ ಮಾಸಿಕ ಬಳಕೆಯು ಸರಾಸರಿ 200 ಯೂನಿಟ್ಗಳಿಗಿಂತ ಕಡಿಮೆಯಿದ್ದಲ್ಲಿ ವಿದ್ಯುತ್ ಉಚಿತವಾಗಿ ಪಡೆಯಬಹುದು ಎಂದಿದೆ.