ಮುಂಬೈ, ಜು 02 (DaijiworldNews/HR): ಎನ್ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇನ್ನು ಅಜಿತ್ ಅವರೊಂದಿಗೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್, ಎನ್ಸಿಪಿ ನಾಯಕ ಛಗನ್ ಭುಜಬಲ್ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.