ಮುಂಬೈ, ಜು 02 (DaijiworldNews/HR): ಮೇಲ್ಸೇತುವೆಯ ಮೇಲಿಂದ ಕಾರೊಂದು ರೈಲ್ವೇ ಹಳಿಗೆ ಬಿದ್ದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 5 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಅತಿ ವೇಗದಲ್ಲಿ ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಗಾಯಾಳುಗಳು ಚೇತರಿಸಿಕೊಂಡ ಬಳಿಕ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.