ತುಮಕೂರು, ಜೂ 03 (DaijiworldNews/HR): "ಜನರು ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು" ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದರು.
ಇನ್ನು ಉಚಿತ ಭಾಗ್ಯ ಮುಂದುವರಿದರೆ ಚುನಾವಣೆ ಮಾಡುವುದು ತುಂಬಾ ಕಷ್ಟವಾಗುತ್ತೆ. ರಾಜ್ಯದ ತೆರಿಗೆದಾರರ ದುಡ್ಡು ಇಷ್ಟಬಂದ ಹಾಗೇ ಹಂಚುತ್ತೇನೆ ಅಂದರೇ ಮನೆಯಲ್ಲಿ ಕೂತವರಿಗೆ ಹಂಚುತ್ತೇನೆ ಅಂದ್ರೆ ರಾಜ್ಯದ ಪರಿಸ್ಥಿತಿ ಏನಾಗಬೇಡ ಎಂದಿದ್ದಾರೆ.
ದಾಸ್ತಾನು ಇರುವ ಅಕ್ಕಿ ಬರಗಾಲ, ಅತಿವೃಷ್ಟಿ ಸಂದರ್ಭದಲ್ಲಿ ನೀಡುತ್ತಾರೆ. ನಮ್ಮಲ್ಲಿ ಅಕ್ಕಿ ಇದೆ ಎಂದು ಹೇಳಿ ಬೇಕಾಬಿಟ್ಟಿ ಹಂಚೋಕಾಗುತ್ತಾ? ಕರ್ನಾಟಕಕ್ಕೆ ಅಂತಹ ಪರಿಸ್ಥಿತಿ ಬಂದರೇ ಮೋದಿ ಅಕ್ಕಿ ಕೊಟ್ಟೇ ಕೊಡುತ್ತಾರೆ ಎಂದು ಹೇಳಿದ್ದಾರೆ.