ಬೆಂಗಳೂರು,ಏ2(AZM): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಏ.13ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಬರಲಿದ್ದಾರೆ. ಎ.8ರಿಂದ ರಾಜ್ಯದ ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಎ.8ರಂದು ಚಿತ್ರದುರ್ಗದಲ್ಲಿ ಅದೇ ದಿನ ಮಧ್ಯಾಹ್ನ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎ.13ಕ್ಕೆ ಮಂಗಳೂರು, ಅದೇ ದಿನ ಸಂಜೆ ಬೆಂಗಳೂರಿನಲ್ಲಿ, ಎ.18ರಂದು ಚಿಕ್ಕೋಡಿ ಮತ್ತು ರಾಯಚೂರು ಜಿಲ್ಲೆ ಗಂಗಾವತಿಯಲ್ಲಿ ಮೋದಿ ಭಾಷಣ ಮಾಡಲಿದ್ದಾರೆ ಎಂದರು.
: ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಎ.10, 12, 17 ಮತ್ತು 20ರಂದು ದಾವಣಗೆರೆ, ಹಾಸನ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಧಾರವಾಡ ಮತ್ತು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.