ಬೆಂಗಳೂರು, ಜು 7 (DaijiworldNews/MS): ಕಾರ್ಮಿಕ ಇಲಾಖೆಯಿಂದ ಅನರ್ಹರು ಕಾರ್ಮಿಕ ಕಾರ್ಡ್ಗಳನ್ನು ಪಡೆದಿರುವುದು ಗಮನಕ್ಕೆ ಬಂದಿದ್ದು, ಅಂಥವರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಪರಿಷತ್ನಲ್ಲಿ ಮಾತನಾಡಿ, ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿ ಸರ್ಕಾರದ ಸೌಲಭ್ಯ ಪಡೆಯುತ್ತಿದ್ದ 24 ಸಾವಿರ ನಕಲಿ ಕಾರ್ಮಿಕರ ನೋಂದಣಿ ರದ್ದು ಮಾಡಲಾಗಿದೆ. ಹಿಂದಿನ ೪ ವರ್ಷಗಳ ಅವಧಿಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿದ್ದ ಸೆಸ್ನಲ್ಲಿ ೧೦೨೩೬ ಕೋಟಿ ರೂ.ಗಗಳನ್ನು ಖರ್ಚು ಮಾಡಲಾಗಿದೆ ಎಂದರು.
2006-07 ರಿಂದ ಇಲ್ಲಿಯವರೆಗೆ ಸುಮಾರು 57 ಲಕ್ಷ ಮಂದಿ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸದಸ್ಯರಾಗಿದ್ದಾರೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.