ಬೆಂಗಳೂರು, ಜು 7 (DaijiworldNews/MS): 2023-24ನೇ ಸಾಲಿನ ಕರ್ನಾಟಕ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಸ್ವಿಗ್ಗಿ, ಜೊಮಾಟೊ ಮತ್ತು ಅಮೆಜಾನ್ನಂತಹ ಇ-ಕಾಮರ್ಸ್ ಡೆಲಿವರಿ ಬಾಯ್ಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಇ-ಕಾಮರ್ಸ್ ಡೆಲಿವರಿ ಬಾಯ್ ಗಿಗ್ ವರ್ಕರ್ಸ್ಗಳಾದ ಸ್ವಿಗ್ಗಿ, ಜೊಮಾಟೊ , ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳ ನೌಕರರಿಗೆ (ಡೆಲಿವರಿ ಬಾಯ್ಗಳಿಗೆ) 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಸಿಎಂ ಘೋಷಣೆ ಮಾಡಿದ್ದಾರೆ.
ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದುಸಿದ್ದರಾಮಯ್ಯ ಹೇಳಿದ್ದಾರೆ.