ಕೇರಳ,ಏ02(AZM):ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಡಿಪಿಐ ಪಕ್ಷದ ಹಿರಿಯ ನಾಯಕ ಎ.ಸಯೀದ್ ಇಂದು ಸಂಜೆ ನಿಧನರಾಗಿದ್ದಾರೆ.
ಕ್ಯಾನ್ಸರ್ಗೆ ಕೇರಳದ ಕೊಝಿಕ್ಕೋಡ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಯೀದ್ ಅವರು ಇಂದು ಸಂಜೆ ಸುಮಾರು ಐದು ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 1955ರಲ್ಲಿ ಜನಿಸಿದ ಎ.ಸಯೀದ್ 2002ರಿಂದ 2006ರವರೆಗೆ ರಾಷ್ಟ್ರೀಯ ಅಭಿವೃದ್ಧಿ ರಂಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ನಂತರ ಪಿಎಫ್ಐಯ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಎಸ್ಡಿಪಿಐಯ ಎಲ್ಲ ನಾಯಕರು, ಸದಸ್ಯರು ಮತ್ತು ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಎಪ್ರಿಲ್ 3ರಂದು ಬೆಳಿಗ್ಗೆ 10 ಗಂಟೆಗೆ ಎಡವನ್ನ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.