ಭುವನೇಶ್ವರ,ಜು 12 (DaijiworldNews/AK) ಬಾಲಸೋರ್ನ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಡೆದ ಮೂರು ರೈಲು ಅಪಘಾತಕ್ಕೆ ಸಂಬಂಧಪಟ್ಟಂತೆ 7ಮಂದಿ ರೈಲ್ವೆ ಸಿಬ್ಬಂದಿಗಳ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ಏಳು ಮಂದಿ ರೈಲ್ವೆ ನೌಕರರ ವಿರುದ್ಧ ಕ್ರಮಕೈಗೊಳ್ಳಲಾಗಿದ್ದು, ಕೆಲಸದಲಿ ನಿರ್ಲಕ್ಷ್ಯ ತೋರಿದ ಹಿನ್ನಲೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ ಜಿಎಂ ಅನಿಲ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಇನ್ಸ್ಪೆಕ್ಟರ್ ಮತ್ತು ನಿರ್ವಾಹಕರ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಇನ್ಸ್ಪೆಕ್ಟರ್ ಮತ್ತು ನಿರ್ವಾಹಕ ಸಿಬ್ಬಂದಿಗಳು ಆ ಸಮಯದಲ್ಲಿ ಎಚ್ಚೆತ್ತುಕೊಂಡಿದ್ದರೆ ದೊಡ್ಡ ಅನಾಹುತ ತಪ್ಪಿಸಬಹುದಿತ್ತು ಎಂದು ಅನಿಲ್ ಕುಮಾರ್ ಮಿಶ್ರಾ ತಿಳಿಸಿದರು. ಈ ದುರಂತಕ್ಕೆ ಸಂಬಂಧಪಟ್ಟಂತೆ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಸಿಬಿಐ ಬಂಧಿಸಿತ್ತು. ಮೂವರನ್ನು ಇನ್ನೂ ಐದು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ಸಿಬಿಐಗೆ ನ್ಯಾಯಾಲಯ ಅನುಮತಿ ನೀಡಿದೆ
ಜೂನ್ 2 ರಂದು ಎರಡು ಪ್ರಯಾಣಿಕ ರೈಲುಗಳು ಮತ್ತು ಗೂಡ್ಸ್ ರೈಲ ನಡುವೆ ನಡೆದ ಅಪಘಾತದಲ್ಲಿ 290 ಕ್ಕೂ ಹೆಚ್ಚು ಜನರು ಮತ್ತು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅಪಘಾತವು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ರೈಲು ನಡುವೆ ನಡೆದಿತ್ತು.
ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಆಜಾಗರೂಕತೆ ಮತ್ತು ಹಲವಾರು ಹಂತಗಳಲ್ಲಿ ಸಿಗ್ನಲಿಂಗ್ ಮತ್ತು ದೂರಸಂಪರ್ಕ ವಿಭಾಗಗಳಲ್ಲಿನ ಲೋಪದೋಷಗಳು ಈ ದುರಂತಕ್ಕೆ ಕಾರಣವೆಂದು ರೈಲು ಸುರಕ್ಷತಾ ಆಯೋಗದ ಉನ್ನತ ಮಟ್ಟದ ತನಿಖೆಯಲ್ಲಿ ತಿಳಿದು ಬಂದಿದೆ.