ಬೆಂಗಳೂರು, ಜು 14 (DaijiworldNews/MS): ರಾಜ್ಯ ಬಜೆಟ್ ಮಂಡನೆ ತಿಪ್ಪೇರುದ್ರಪ್ಪ ಎಂಬ ವ್ಯಕ್ತಿ ವಿಧಾನ ಸೌಧದ ಸದನದ ಒಳಗೆ ಪ್ರವೇಶಿಸಿ, ಶಾಸಕರ ಸ್ಥಾನದಲ್ಲಿ ಕೂತಿದ್ದು ಭದ್ರತಾ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಇದಾದ ನಂತರ ಎಚ್ಚೆತ್ತುಕೊಂಡ ಪೊಲೀಸರು ವಿಧಾನಸೌಧದಲ್ಲಿ ನಕಲಿ ಪಾಸ್ಗಳ ಹಾವಳಿ ಜಾಲವನ್ನು ಪತ್ತೆ ಹಚ್ಚಿದ್ದಾರೆ.
ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಲಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ 300 ಕ್ಕೂ ಹೆಚ್ಚು ನಕಲಿ ಪಾಸ್ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸಿಸಿಬಿ ಮುಖ್ಯಸ್ಥರಾಗಿದ್ದ ಡಾ.ಶರಣಪ್ಪ ವಿಧಾನಸೌಧ ಭದ್ರತೆ ನೇತೃತ್ವ ವಹಿಸಿಕೊಂಡಿದ್ದು, ತಪಾಸಣೆ ಸಂದರ್ಭದಲ್ಲಿ ಅಧಿಕೃತ ಪಾಸ್ಗಳ ಕಲರ್ ಜೆರಾಕ್ಸ್, ಹಳೇ ಪಾಸ್ಗಳು, ಅವಧಿ ಮುಗಿದಿರೋ ಪಾಸ್ಗಳನ್ನು ಬಳಸಲಾಗುತ್ತಿತ್ತು. ಅಲ್ಲದೇ ಕೆಲ ವಾಹನಗಳ ನಕಲಿ ಪಾಸ್ ಪತ್ತೆಯಾಗಿವೆ. ಎಲ್ಲರ ವಿರುದ್ದ ಪ್ರಕರಣ ದಾಖಲಿಸಲಾಗಿದೆ