ಚಿಕ್ಕಮಗಳೂರು, ಜು 14 (DaijiworldNews/HR): ಟೊಮೆಟೋ ಬೆಲೆ ಗನಗಕ್ಕೇರುತ್ತಿರುವ ನಡುವೆ ಇದೀಗ ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿ ಬೆಲೆ ಹೆಚ್ಚಾಗಿದೆ.
100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದ್ದು, ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇದ್ದು, ಇದೀಗ ಶುಂಠಿ ಬೆಲೆ ಗಗನಕ್ಕೇರಿದೆ.
ಇನ್ನು ಹಳೆ ಶುಂಠಿಗೆ 18ರಿಂದ 20 ಸಾವಿರ ರೂ. ಇದ್ದು, ಈ ವರ್ಷ ಬೆಳೆದಿರುವ ಶುಂಠಿಗೆ 10 ರಿಂದ 12 ಸಾವಿರ ರೂ.ಇದೆ. ಇದರಿಂದ ಕಳೆದ ವರ್ಷದ ಶುಂಠಿಯನ್ನ ಹೊಲದಲ್ಲಿ ಉಳಿಸಿಕೊಂಡ ರೈತರು ಖುಷಿಯಲ್ಲಿದ್ದಾರೆ.
2011 ರಿಂದ 2023ರಲ್ಲಿ ಇದೆ ಮೊದಲಿ ಬಾರಿಗೆ ಶುಂಠಿ ಬೆಲೆ 20 ಸಾವಿರ ರೂ. ಗಡಿ ತಲುಪಿದೆ ಎನ್ನಲಾಗಿದೆ.