ನವದೆಹಲಿ, ಜು 15 (DaijiworldNews/MS): ಫ್ರಾನ್ಸ್ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ತೆರಳಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ.
ಈ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ , ವ್ಯಾಪಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
೨೦೨೨ರ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಮೋದಿ ಅವರ ಎರಡನೇ ಭೇಟಿ ಇದಾಗಿದೆ.