ಕಲಬುರಗಿ,ಜು 15 (DaijiworldNews/MS): ಭಾರತೀಯ ಜನತಾ ಪಕ್ಷದ ನಾಯಕ, ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.
ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ.
ರೌಡಿ ಶೀಟರ್ ಕೂಡ ಆಗಿರುವ ರಾಠೋಡ್ನ್ನು ಪೊಲೀಸರು ರಾತ್ರೋರಾತ್ರಿ ಬಂಧಿಸಿ ಕರೆದೊಯ್ದಿದ್ದು, ಬಳಿಕ ಸ್ಟೇಶನ್ ಜಾಮೀನು ಮೇಲೆ ಹೊರಬಂದಿದ್ದಾರೆ.
ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಸಾಫ್ ಮಾಡುವುದಾಗಿ ಮಣಿಕಂಠ ಕೊಲೆ ಬೆದರಿಕೆ ಹಾಕಿದ್ದ ಆಡಿಯೋ ಚುನಾವಣೆ ವೇಳೆ ತೀವ್ರ ಸಂಚಲನ ಸೃಷ್ಟಿಸಿತ್ತು.