ಬೆಂಗಳೂರು, ಜು 15 (DaijiworldNews/MS): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ವಿ ಸೋಮಣ್ಣ ಅವರ ಕಣ್ಣು ಲೋಕಸಭೆ ಟಿಕೆಟ್ ಮೇಲೆ ಬಿದ್ದಿದೆ.ನಾನು ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ನಾಯಕ ವಿ. ಸೋಮಣ್ಣ ಹೇಳಿದ್ದಾರೆ.
ನಿನ್ನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಅವರು ಬಹಳ ಭಾವುಕರಾಗಿ ಮಾತನಾಡಿದ್ದಾರೆ.
ಕಳೆದ ೨೦ ವರ್ಷಗಳಿಂದ ಬೆಂಗಳೂರು ದಕ್ಷಿಣದಲ್ಲಿ ಒಂದೇ ಸಮುದಾಯಕ್ಕೆ ಟಿಕೆಟ್ ನೀಡಲಾಗುತ್ತಿದ್ದು, ಈ ಬಾರಿ ಬೇರೆಯವರಿಗೆ ಕೊಡಲಿ. ನಾನು ಕೂಡ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮೂಲಕ ತೇಜಸ್ವಿ ಸೂರ್ಯ ಕ್ಷೇತ್ರದ ಟಿಕೆಟ್ ಈ ತಮಗೆ ಬೇಕೆಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾರುಆರು ಸೋಲಿಗೆ ಕಾರಣರಾದವರಿಗೆ ಶಿಕ್ಷೆ ಆಗಲೇ ಬೇಕು ಎಂದಿದ್ದಾರೆ.