ಬೆಂಗಳೂರು, ಜು 16 (DaijiworldNews/MS): ಹಿರಿಯ ರಾಜಕಾರಣಿ ಮಾಜಿ ಸಚಿವ ಶಿವನಗೌಡ ರುದ್ರಗೌಡ ಪಾಟೀಲ್ (ಎಸ್.ಆರ್.ಪಾಟೀಲ್) ಅವರಿಗೆ 2021ನೇ ಸಾಲಿನ ಅತ್ಯುತ್ತಮ ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ.
ಎಸ್.ಆರ್.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ನೀಡಿ ಎಸ್.ಆರ್. ಪಾಟೀಲ್ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್ ಅವರು ಪತ್ರ ಬರೆದಿದ್ದಾರೆ.