ಬೆಂಗಳೂರು,ಜು 16 (DaijiworldNews/AK) ಪೊಲೀಸ್ ಇಲಾಖೆಯಲ್ಲಿ ಸಬ್ಇನ್ಸ್ಪೆಕ್ಟರ್ಗಳ ಕೊರತೆ ಇದ್ದು, 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನ ಮಾಡುತ್ತೇವೆ. 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆ ನ್ಯಾಯಾಲಯದಲ್ಲಿ ಮುಂದುವರಿದಿದೆ. ಪುನರ್ ಪರೀಕ್ಷೆ ಮಾಡಬೇಕೆಂದು ಹಿಂದಿನ ಸರ್ಕಾರ ಆದೇಶಿಸಿತ್ತು. ಸರ್ಕಾರದ ಆದೇಶಕ್ಕೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಹೈಕೋರ್ಟ್ನಿಂದ ನಿರ್ದೇಶನ ಬರಬೇಕು. ಈಗಾಗಲೇ ಸರ್ಕಾರದ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಕೋರ್ಟ್ ತೀರ್ಪು ಬಂದ ಮೇಲೆ ಅದರ ಪ್ರಕಾರ ಕ್ರಮಕೈಗೊಳ್ಳುತ್ತೇವೆ ಎಂದರು.
ಇದೇ ವೇಳೆ ನಾಳೆ ಬೆಂಗಳೂರಿನಲ್ಲಿ ನಡೆಯುವ ವಿರೋಧ ಪಕ್ಷದ ನಾಯಕರ ಸಭೆ ವಿಚಾರವಾಗಿ ಮಾತನಾಡಿ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳಾಗಿ ಪ್ರಯತ್ನ ಮಾಡುತ್ತಿದ್ದೇವೆ. ನಾಳಿನ ಸಭೆಯಲ್ಲಿ 20 ಪಕ್ಷಗಳ ಮುಖಂಡರು ಭಾಗಿಯಾಗುತ್ತಾರೆ.ಇದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.