ಬೆಂಗಳೂರು,17 (DaijiworldNews/AK): ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಜೊತೆಯಾಗಿ ಸೇರುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಸೋಲಿಸಲು ಒಗ್ಗೂಡುತ್ತಿದ್ದು, ರಾಜಕೀಯ ಲೆಕ್ಕಾಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸಭೆ ಸೇರಿದ್ದಾರೆ ಎಂದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ , ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಜೊತೆ ಸೇರುತ್ತಿದ್ದಾರೆ. ರಾಜ್ಯದಲ್ಲಿ ಜಾಮೀನು ಮೇಲೆ ಇರುವ ಎಲ್ಲಾ ಕುಟುಂಬಗಳು ಒಟ್ಟಿಗೆ ಸೇರಿವೆ. ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಜೈಲೇ ಗತಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಎಲ್ಲಾ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಬರಗಾಲದ ಛಾಯೆ ,ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಹಿಂದೂ ಕಾರ್ಯಕರ್ತರ ಜೋಡಿ ಕೊಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.