ಬೆಂಗಳೂರು, ಜು 17 (DaijiworldNews/AK):ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಅಗಮಿಸಿದ್ದಾರೆ.
ಅವರನ್ನು ಹೆಚ್ಎಎಲ್ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು.
ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದೆ. ಒಟ್ಟು 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಈ ಸಭೆಯ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಹಿಸಿಕೊಂಡಿದ್ದು, ಖಾಸಗಿ ಹೊಟೇಲ್ ನಲ್ಲಿ ನಾಯಕರಿಗೆ ಉಳಿದುಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇಂದು ಸಂಜೆ 6 ಗಂಟೆಗೆ ಅನೌಪಚಾರಿಕ ಸಭೆಯೊಂದು ನಡೆಯಲಿದ್ದು ಅದು ಮುಗಿದ ನಂತರ ಎಲ್ಲಾ ನಾಯಕರಿಗೆ ಸಿಎಂ ಸಿದ್ದರಾಮಯ್ಯ ರಾತ್ರಿ ಔತಣಕೂಟ ಏರ್ಪಡಿಸಿದ್ದಾರೆ. ನಾಳೆ ಜುಲೈ 18ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಭೆ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿದೆ.